ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,975 ಮಂದಿಗೆ ಕೊರೋನಾ ಸೋಂಕು…

ನವದೆಹಲಿ,ನವೆಂಬರ್,24,2020(www.justkannada.in):  ದೇಶದಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು ಈ ನಡುವೆ  ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. kannada-journalist-media-fourth-estate-under-loss

ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶಾದ್ಯಂತ ಒಂದೇ ದಿನ 37,975 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ.37975-people-coronavirus-last-24-hours-country

ಇನ್ನು ನಿನ್ನೆ ಒಂದೇ ದಿನ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ.

Key words: 37,975 people-coronavirus – last 24 hours – country.