ಕೀವಿಸ್ ವಿರುದ್ಧ 3ನೇ ಏಕದಿನ ಪಂದ್ಯ:  ರೋಹಿತ್  ಶರ್ಮಾ ಮತ್ತು ಶುಬ್ಮನ್ ಗಿಲ್ ಭರ್ಜರಿ ಶತಕ.

Promotion

 ಇಂದೋರ್,ಜನವರಿ,24,2023(www.justkannada.in) ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದು ಇಬ್ಬರೂ ಶತಕ ಸಿಡಿಸಿ ಔಟ್ ಆಗಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ಇಂದೋರ್‌ನಲ್ಲಿ ನಡೆಯುತ್ತಿದೆ.  ಟಾಸ್ ಗೆದ್ದ ಕಿವೀಸ್ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡು ಭಾರತವನ್ನ ಬ್ಯಾಟಿಂಗ್ ಗೆ ಇಳಿಸಿದರು.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್  ಕೀವಿಸ್ ಬೌಲರ್ ಗಳನ್ನ ದಂಡಿಸಿದರು. ರೋಹಿತ್ ಶರ್ಮಾ 85 ಬಾಲ್ ಗಳಲ್ಲಿ 101 ರನ್ ಬಾರಿಸಿ ಬ್ರಸ್ ವೆಲ್ ಗೆ ವಿಕೆಟ್ ಒಪ್ಪಿಸಿದರು.

ಹಾಗೆಯೇ ಮೊದಲ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಭರ್ಜರಿ ಫಾರ್ಮ್ ನಲ್ಲಿರುವ ಶುಬ್ಮನ್ ಗಿಲ್ ಇಂದೂ ಕೂಡ ಭರ್ಜರಿ ಆಟವಾಡಿ 78 ಬಾಲ್ ಗಳಿಗೆ 112 ರನ್ ಸಿಡಿಸಿ ಔಟ್ ಆದರು. ಪ್ರಸ್ತುತ ಭಾರತ 35 ಓವರ್ ಗಳಲ್ಲಿ 273 ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಸ್ಕ್ರೀಜ್ ನಲ್ಲಿದ್ದಾರೆ.

ಸರಣಿಯ ಮೊದಲ ಪಂದ್ಯವನ್ನು ಭಾರತ 12 ರನ್‌ಗಳಿಂದ ಗೆದ್ದುಕೊಂಡಿತ್ತು. ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತಕ್ಕೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ, ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ.

Key words: 3rd ODI – Kiwis-Rohit Sharma – Shubman Gill – centuries.