ಏಪ್ರಿಲ್ 3 ರಂದು ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ : ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ 

Promotion

ಮೈಸೂರು,ಏಪ್ರಿಲ್,01,2021(www.justkannada.in) : ಏಪ್ರಿಲ್ 3 ರಂದು ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ ನಡಯಲಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

Illegally,Sand,carrying,Truck,Seized,arrest,driverಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಾಲಯದಲ್ಲಿ ರಥೋತ್ಸವ ದಿನದಂದು ಬೆಟ್ಟಕ್ಕೆ ಹೆಚ್ಚಿನ ಸಾರ್ವಜನಿಕರು ಆಗಮಿಸುವ ಹಿನ್ನಲೆ, ಕೋವಿಡ್ 19 ಹರಡುವಿಕೆ ತಡೆಯುವ ಉದ್ದೇಶದಿಂದ ಪ್ರವೇಶ ನಿಷೇಧಿಸಲಾಗಿದೆ.

ಉತ್ಸವದಲ್ಲಿ ಧಾರ್ಮಿಕ ಕಾರ್ಯಗಳು ದೇವಾಲಯ ಒಳ ಆವರಣದಲ್ಲಿ ನಡೆಯಲಿವೆ. ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸರಳ ರಥೋತ್ಸವ ಜರುಗಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ ಸುರಕ್ಷಿತ ಹಾಗೂ ಸರಳವಾಗಿ ನಡೆಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವಕಾಶ ಕಲ್ಪಿಸಿದ್ದಾರೆ.

key words : 3rd-April-Sri Mahabaleshwar Swamy-Chariot Festival-public-Restrict-access-DC-Order