ನಾಗರೀಕರೊಬ್ಬರನ್ನ ರಕ್ಷಿಸಲು ಹೋಗಿ ತೀವ್ರವಾಗಿ ಗಾಯಗೊಂಡ ಪೊಲೀಸ್ ಸಿಬ್ಬಂದಿಗಳಿಗೆ 4 ಲಕ್ಷ ರೂ. ಸಹಾಯಧನ- ಗೃಹ ಸಚಿವ ಆರಗ ಜ್ಞಾನೇಂದ್ರ.

kannada t-shirts

ತುಮಕೂರು, ಮೇ,25,2022(www.justkannada.in): ಪ್ರಾಣದ ಹಂಗು ತೊರೆದು,  ನಾಗರೀಕನೊಬ್ಬನ ರಕ್ಷಣೆಗೆ ಧಾವಿಸಿ, ತೀವ್ರವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ, ತಲಾ ಎರಡು ಲಕ್ಷ ರೂಪಾಯಿಗಳ ಸಹಾಯಧನವನ್ನು ಇಲಾಖೆ ಬಿಡುಗಡೆಗೊಳಿಸಿ ಆದೇಶ ಮಾಡಲಾಗಿದೆ.

ಈ ಕುರಿತು ಮಾಧ್ಯಮಗಳ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ತುಮಕೂರು ಜಿಲ್ಲೆಯ ಲಿಂಗನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ರಕ್ಷಿಸಲು ಹೋದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್ ಗಳು, ಸುಟ್ಟಗಾಯಗಳಿಂದಾಗಿ ಅಸ್ಪತ್ರೆಗೆ ದಾಖಲಾಗಿದ್ದರು.

ಜಿಲ್ಲಾ ಪೊಲೀಸ್ ಮುಖ್ಯಸ್ಥ  ರಾಹುಲ್ ರವರು, ಗಾಯಾಳು ಪೊಲೀಸರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಸುಟ್ಟ ಗಾಯಗಳಿಂದ ಅಸ್ಪತ್ರೆಗೆ ದಾಖಲಾದ ಕಾನ್ಸ್ ಟೇಬಲ್ ಗಳು, ಪ್ರಸ್ತುತ ಚೇತರಿಸಿ ಕೊಳ್ಳುತ್ತಿದ್ದಾರೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Key words: 4 lakhs – police -rescue – compensation- Home Minister -Aaraga Gnanendra.

website developers in mysore