“40 ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಚಿಕಿತ್ಸಾ ವಾಹನ” : ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ…!

ಬೆಂಗಳೂರು,ಜನವರಿ,07,2021(www.justkannada.in) : ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಚಿಕಿತ್ಸಾ ವಾಹನಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದರ ವರದಿ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk-logo-justkannada-mysore

ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ದ್ವಾರದ ಮುಂಭಾಗ 40 ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಚಿಕಿತ್ಸ ವಾಹನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಪ್ರತಿಯೊಂದು ರೈತ ಸಂಪರ್ಕ ಕೇಂದ್ರಕ್ಕೂ ಒಂದೊಂದು ಕೃಷಿ ಸಂಜೀವಿನಿ ವಾಹನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗ ನಲವತ್ತು ವಾಹನಗಳನ್ನು ಲೋಕಾರ್ಪಣೆ ಮಾಡಿದ್ದೇನೆ ಎಂದರು.

ಕೃಷಿ ಸಂಜೀವಿನಿ ವಾಹನಗಳು ಆಯಾ ಹೊಲಗಳಿಗೆ ಹೋಗಿ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ವಾಹನವಾಗಿದೆ. ಇವು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದರ ವರದಿ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸುವ ಚಿಂತನೆ ಮಾಡುವುದಾಗಿ ತಿಳಿಸಿದರು.

ಜಿಲ್ಲೆಗೆ ಒಂದು ದೊಡ್ಡ ಜಿಲ್ಲೆಗಳಿಗೆ ಎರಡು ಕೃಷಿ ಸಂಜೀವಿನಿ ವಾಹನ…!ಈ ಸಂದರ್ಭ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಇದು ಲ್ಯಾಬ್ ಟೂ ಲ್ಯಾಂಡ್ ಯೋಜನೆಯಾಗಿದ್ದು, ಕೃಷಿ ಸಂಜೀವಿನಿ ವಾಹನಕ್ಕೆ ಆ್ಯಂಬ್ಯುಲೆನ್ಸ್ ಮಾದರಿಯ ಸೈರನ್ ಅಳವಡಿಸಲಾಗಿದೆ ಎಂದರು.

ಚಿಕ್ಕ ಜಿಲ್ಲೆಗಳಿಗೆ ಒಂದು ದೊಡ್ಡ ಜಿಲ್ಲೆಗಳಿಗೆ ಎರಡರಂತೆ ರಾಜ್ಯಾದ್ಯಂತ ಒಟ್ಟು 40 “ಕೃಷಿ ಸಂಜೀವಿನಿ” ವಾಹನಗಳು ರೈತರಿಗಾಗಿ ಲೋಕಾರ್ಪಣೆಗೊಳಿಸಲಾಗಿದೆ. ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ) ಎಂದರೆ, ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ , ಅತಿವೃಷ್ಟಿ , ಚಂಡಮಾರುತ , ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತೆ , ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ , ರೋಗ – ಕೀಟಗಳ ಹತೋಟಿ , ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ , ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ ಎಂದರು.

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ) ಕಾರ್ಯ…!

ಕೀಟ , ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ) ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಕ್ರಿಯಾ ಯೋಜನೆಯಡಿ ಲಭ್ಯವಿರುವ ಅನುದಾನದಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ ) ಲೋಕಾರ್ಪಣೆಗೊಳಿಸಲಾಗುತ್ತಿದೆ ಎಂದು ಹೇಳಿದರು.

ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ, ಕಂಡುಬರಬಹುದಾದ ಕೀಟ, ರೋಗ, ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು. ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ಥಿತ್ವದಲ್ಲಿದೆ ಎಂದರು.

ಸದರಿ ಸಲಹಾ ಸಮಿತಿಗಳಲ್ಲಿ ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು , ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ವಿಜ್ಞಾನಿಗಳು , ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡಿರುತ್ತದೆ . ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ ಎಂದು ವಿವರಿಸಿದರು.

ಸಂಚಾರಿ ವಾಹನದ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ತಾಂತ್ರಿಕ ತಂಡವು ಭೇಟಿ ನೀಡಲು ಸಹಕಾರಿಯಾಗುತ್ತದೆ. ಬೆಳೆಗಳಲ್ಲಿ ಕೀಟ ಮತ್ತು ರೋಗಗಳ ಬಾಧೆಯನ್ನು ನಿಖರವಾಗಿ ಹಾಗೂ ಸಮಯೋಚಿತವಾಗಿ ಗುರುತಿಸುವ ಸಲುವಾಗಿ ರಾಜ್ಯ ಸರ್ಕಾರದ ಅನುದಾನ ಮೂಲಕ  ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೀಟ, ರೋಗಗಳ ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಸಲಹೆ ನೀಡಲು ಇ – ತಂತ್ರಾಂಶ ( ಇ – ಸ್ಯಾಪ್ ) ಬಳಕೆಯ ಮೂಲಕ ನಿಯಮಿತವಾಗಿ ರೈತರ ಜಮೀನಿಗೆ ಭೇಟಿ ನೀಡುವುದಾಗಿದೆ ಎಂದರು.

ಸರ್ವೇಕ್ಷಣೆಯಲ್ಲಿ ಕೀಟ, ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್ ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ. ಈ ದಿಸೆಯಲ್ಲಿ ರೈತರು ಸುಲಭ ಪರೀಕ್ಷೆಗಳಿಂದ ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು.

ತದನಂತರ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟವನ್ನು ಪ್ರಾರಂಭಿಕವಾಗಿ ತಿಳಿದು ಖರೀದಿಸಬಹುದಾಗಿದೆ. 155313 ಇದು ಕೃಷಿ ಸಂಜೀವಿನಿ ಸಹಾಯವಾಣಿಯಾಗಿದ್ದು, ಈ ಸಂಖ್ಯೆಗೆ ಯಾವುದಾದರೂ ಜಿಲ್ಲೆಯಿಂದ ಕರೆ ಮಾಡಿದಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ಕರೆ ಮಾಡಿದ ರೈತರಿರುವ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗುತ್ತದೆ.40 Agro-Sanjeevani-Traffic-plant-Therapy-Vehicle-CM B.S.Yeddyurappa-Releaseಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದ್ದು, 155313 ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ನಂತೆ ಸಹಾಯವಾಣಿಯಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಈ ಸಂದರ್ಭ ಚಾಲಕರು ಕೃಷಿ ಸಂಜೀವಿನಿ ವಾಹನ ಚಲಾಯಿಸಿ ಪ್ರಾತ್ಯಕ್ಷಿಕೆ ತೋರಿಸಿದರು.

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಎಸ್.ಟಿ‌.ಸೋಮಶೇಖರ್, ಶಾಸಕ ಬೈಯ್ಯಾರೆಡ್ಡಿ ಉಪಸ್ಥಿತರಿದ್ದರು.

ENGLISH SUMMARY…..

“CM BSY dedicates 40 Krishi Sanjeevini Mobile Plant Treatment Vehicles to the nation
Mysuru, Jan. 07, 2021 (www.justkannada.in): Chief Minister B.S. Yedyurappa today dedicated 40 Krishi Sanjeevini Mobile Plant Treatment vehicles to the nation, at a programme held in front of the Vidhana Soudha, in Bengaluru.40 Agro-Sanjeevani-Traffic-plant-Therapy-Vehicle-CM B.S.Yeddyurappa-Release
Speaking on the occasion he said, “The number of the vehicles will be increased based on the response. A proposal is submitted to the government to provide one vehicle to each ‘Raitha Samparka Kendra.’ 40 vehicles have been released today. These vehicles will visit the agricultural fields in their function areas, and conduct testing of the soil, water, and crop diseases. Plans are made to increase its numbers based on its performance,” he added.
Keywords: CM BSY/ Krishi Sanjeevini Mobile Plant Treatment vehicles/ dedicated to nation

key words : 40 Agro-Sanjeevani-Traffic-plant-Therapy-Vehicle-CM B.S.Yeddyurappa-Release