ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಡಿ.ಕೆ ಶಿವಕುಮಾರ್ ಆಗ್ರಹ.

ನವದೆಹಲಿ,ಜೂನ್,28,2022(www.justkannada.in): ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿದ್ದ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಪಂದಿಸಿರುವ ಪ್ರಧಾನಿ ಕಾರ್ಯಾಲಯ ದಾಖಲೆ, ಸಾಕ್ಷ್ಯ ನೀಡುವಂತೆ ಸೂಚನೆ ನೀಡಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪತ್ರ ಬರೆದ ಒಂದು ವರ್ಷದ ಬಳಿಕ ಪ್ರಧಾನಿ ಕಾರ್ಯಾಲಯ ದಾಖಲೆ ಕೇಳಿದೆ. ಈಗ ವರದಿ ಕೇಳಿದೆಯಂತೆ.  ಕಮಿಷನ್ ವಿಚಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಯಾಗಬೇಕು. ವರದಿ ಕೇಳುವ ಬದಲು ಐಟಿಯಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.

Key words: 40% commission – against –government-DK Shivakumar -probe – Supreme Court -justices