40% ಕಮಿಷನ್ ಸಂಭ್ರಮಾಚರಣೆ ಮಾಡಿಕೊಳ್ಳಲು ಹೊರಟಿದ್ದಾರೆ- ಬಿಜೆಪಿ ಸಾಧನಾ ಸಮಾವೇಶದ ಬಗ್ಗೆ ಸಿದ್ಧರಾಮಯ್ಯ ಟೀಕೆ.

ಬೆಂಗಳೂರು,ಜುಲೈ,26,2022(www.justkannada.in):  ಸರ್ಕಾರ ಒಂದು ವರ್ಷದ ಸಾಧನಾ ಸಮಾವೇಶ ಮಾಡುತ್ತಿದೆ. ಆದ್ರೆ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ.  40% ಕಮಿಷನ್ ಸಂಭ್ರಮಾಚರಣೆ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿದ್ಧರಾಮಯ್ಯ,  ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ನಮಗೆಲ್ಲಾ ಭರವಸೆ ಇತ್ತು. ಆದರೆ ಈಗ ಬೊಮ್ಮಾಯಿ ಆಡಳಿತ ನೋಡದರೇ  ಸಂಪೂರ್ಣ ಭ್ರಮನಿರಸನವಾಗಿದೆ. ಬೊಮ್ಮಾಯಿ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ.  ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಕೊಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.

ಕೆ.ಎಸ್ ಈಶ್ವರಪ್ಪ ವಿರುದ್ಧ ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾದ್ರು. ಆದರೆ ಸರ್ಕಾರ ಕೆ.ಎಸ್  ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ. ಡಿಕ್ಲರೇಷನ್ ಇರುವ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ಆದರೆ ಈಗ 40 ಪರ್ಸೆಂಟ್ ಕಮಿಷನ್ ಸಂಭ್ರಮಾಚರಣೆ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: 40% commission – celebrate-Siddaramaiah-criticizes- BJP