ಕೋವಿಡ್ ಹಿನ್ನೆಲೆ ಸರಳ ಗಣರಾಜ್ಯೋತ್ಸವ: 40 ನಿಮಿಷ ಕಾರ್ಯಕ್ರಮ, ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ

Promotion

ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಬೆಂಗಳೂರು ನಗರ ಜಿಲ್ಲಾಕಾರಿ ಜಿ.ಎನ್.ಶಿವಮೂರ್ತಿ, ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರೊಂದಿಗೆ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದ್ದಾರೆ.

ಈ ಬಾರಿ ಗಣರಾಜ್ಯೋತ್ಸವವು ರಾಜ್ಯಪಾಲರ ಭಾಷಣ, ಗೌರವ ವಂದನೆ ಸ್ವೀಕಾರ ಸೇರಿದಂತೆ ಕೇವಲ 40 ನಿಮಿಷಗಳು ಮಾತ್ರ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.