ದೇಶದಲ್ಲಿ ಒಂದೇ ದಿನ ಹೊಸದಾಗಿ 4,518 ಕೋವಿಡ್ ಪ್ರಕರಣಗಳು ಪತ್ತೆ.

Promotion

ನವದೆಹಲಿ,ಜೂನ್,6,2022(www.justkannada.in): ದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ  ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 4,518 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತುವ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 4518 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಕೋವಿಡ್ ನಿಂದ 9 ಮಂದಿ ಮೃತಪಟ್ಟಿದ್ದಾರೆ. . ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5,24,701 ಕ್ಕೆ ಏರಿಕೆಯಾಗಿದೆ.

ಹಾಗೆಯೇ ಕಳೆದ 24 ಗಂಟೆಗಳಲ್ಲಿ  2,779 ಮಂದಿ ಕೊರೊನಾ ದಿಂದ ಗುಣಮುಖರಾಗಿದ್ದು, ಸದ್ಯ 25,782 ಸಕ್ರಿಯ ಪ್ರಕರಣಗಳಿವೆ.

Key words: 4,518 Covid cases – single day – country.