“5 ಕೋಟಿ ರೂ. ಡೀಲ್ ಆರೋಪ, ದೂರನ್ನು ವಾಪಸ್ಸು ಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ””

Promotion

ರಾಮನಗರ,ಮಾರ್ಚ್,07,2021(www.justkannada.in)  : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ಸು ಪಡೆಯುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ದಿನೇಶ್ ಕಲ್ಲಹಳ್ಳಿ ನಿರ್ಧರಿಸಿದ್ದಾರೆ.

jkಈ ಬಗ್ಗೆ ಖುದ್ದು ದಿನೇಶ್ ಅವರು ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿ ತಮ್ಮ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ದೂರುದಾರ ದಿನೇಶ್ ಕಲ್ಲಹಳ್ಳಿ ಅವರು ದೂರನ್ನು ವಾಪಸ್ ಪಡೆಯುವ ಬಗ್ಗೆ ವಕೀಲರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.

ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ

ನನ್ನ ಮೇಲೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು 5 ಕೋಟಿ ರೂ. ಡೀಲ್ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

5 crore-Deal-charges-Complaint-Back-get-Dinesh Kallahalli,Decision 

ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ

ಮಾಜಿ ಸಿಎಂ ಕುಮಾರಣ್ಣರ ಹೇಳಿಕೆ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆಯೆಂದೇ ಹೇಳಬಹುದು. ಮಾಹಿತಿ ಕೊಡುವವರನ್ನು ಟಾರ್ಗೆಟ್ ಮಾಡುತ್ತಿರುವುದು ನೋವಿನ ಸಂಗತಿ ಎಂದು ದಿನೇಶ್ ಕಲ್ಲಹಳ್ಳಿ ಹೇಳಿದರು.

key words  : 5 crore-Deal-charges-Complaint-Back-get-Dinesh Kallahalli,
Decision