ರಾಜ್ಯಕ್ಕೆ ಹರಿದು ಬರಲಿದೆ 5 ಲಕ್ಷ ಕೋಟಿ ರೂ. ಬಂಡವಾಳ: ಸಚಿವ ಮುರುಗೇಶ್ ನಿರಾಣಿ

Promotion

ಬೆಂಗಳೂರು, ಮೇ 27, 2022 (www.justkannada.in): ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ.

ಮುಂಬರುವ ನವೆಂಬರ್ ತಿಂಗಳಿನಲ್ಲಿ ಸಮಾವೇಶ ನಡೆಯಲಿದ್ದು, ಈ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡರು.

ಈಗಾಗಲೇ ನಿಗದಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ ಎಂದರು.