ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ- ಕಂದಾಯ ಸಚಿವ ಆರ್.ಅಶೋಕ್.

Promotion

ಬೆಂಗಳೂರು,ಜುಲೈ,12,2022(www.justkannada.in): ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇವೆ. ಮಳೆ ಹಾನಿ, ಭೂಕಂಪ, ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ನೆರೆ ಸಂತ್ರಸ್ತರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.  ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ನೀಡುತ್ತೇವೆ ಎಂದರು.

ಇಂದು ಮತ್ತು ನಾಳೆ ಸಿಎಂ ಬಸವರಾಜ ಬೊಮ್ಮಾಯಿ , ಕೊಡಗು, ಉಡುಪಿ, ಕಾರವಾರ, ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

Key words: 5 lakhs – compensation- rain-death-Revenue Minister -R. Ashok.