5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ವಿಚಾರ: ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್ .

ಬೆಂಗಳೂರು,ಮಾರ್ಚ್,14,2023(www.justkannada.in):  5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ.

ರಾಜ್ಯ ಸರ್ಕಾರದ 5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ಆದೇಶವನ್ನ  ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ನರೇಂದರ್ ಮತ್ತು ನ್ಯಾ. ಅಶೋಕ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಸಂಬಂಧ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿತು.

ಸರ್ಕಾರ ಪರವಾಗಿ ಎಎಜಿ ವಾದ ಮಂಡನೆ ಮಾಡಿದರು.  ಸರ್ಕಾರದ5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್  ಆದೇಶ ರದ್ದುಪಡಿಸುವಂತೆ ಕೋರಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶವನ್ನ ರದ್ದುಪಡಿಸಿತ್ತು.

Key words:  5th and 8th– class -board –exam- High court -adjourned – hearing