5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ: ಖಾಸಗಿ ಶಾಲೆಗಳ ಒಕ್ಕೂಟದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

ನವದೆಹಲಿ,ಮಾರ್ಚ್,27,2023(www.justkannada.in): 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ  ಗ್ರೀನ್ ಸಿಗ್ನಲ್ ನೀಡಿತ್ತು. ಮಾ.27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

ಬೋರ್ಡ್ ಎಕ್ಸಾಂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪೋಷಕರ  ಶಾಲೆಗಳ ಅಭಿಪ್ರಾಯ ಸಂಗ್ರಹಿಸದೇ ಜಾರಿ ಮಾಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿತ್ತು. ಆದರೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಖಾಸಗಿ ಶಾಲೆಗಳ ಮೇಲ್ಮನವಿ ಅರ್ಜಿ ವಜಾಗೊಳಿಸಿದೆ.

Key words: 5th and 8th –class- board exam-Supreme Court -dismisses -appeal – private schools union