7,8, 9 ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ

ಬೆಂಗಳೂರು, ಮಾರ್ಚ್ 15, 2020 (www.justkannada.in): 7,8 ಮತ್ತು 9 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿರುವ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೊರೊನಾ ವೈರಸ್ ಸೋಂಕು ವ್ಯಾಪಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ 7,8 ಮತ್ತು 9 ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 31 ರವರೆಗೆ ಮುಂದೂಡವಂತೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.