ಹುಬ್ಬಳ್ಳಿಯಲ್ಲಿ ಭೀಕರ ಅಪಘಾತದಿಂದ 8 ಮಂದಿ ಸಾವು: ಮಾಜಿ ಸಿಎಂ ಹೆಚ್.ಡಿಕೆ ಸಂತಾಪ.

Promotion

ಹುಬ್ಬಳ್ಳಿ,ಮೇ,24,2022(www.justkannada.in): ಹುಬ್ಬಳ್ಳಿ ಹೊರ ವಲಯ ತಾರಿಹಾಳ ಬೈಪಾಸ್ ​ನಲ್ಲಿ  ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಹೆಚ್.ಡಿಕೆ, ಹುಬ್ಬಳ್ಳಿ ಹೊರ ವಲಯದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಳೆದ ತಡರಾತ್ರಿ ಸಂಭವಿಸಿರುವ ಈ ದುರಂತದಲ್ಲಿ 26 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ದುರಂತದಲ್ಲಿ ಅಸುನೀಗಿದ ನತದೃಷ್ಟರೆಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ಆವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ, ಗಾಯಾಳುಗಳೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅಪಘಾತ ಸಂಭವಿಸಿದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿಯ ಈ ಜಾಗದಲ್ಲಿ ಪದೇಪದೆ ದುರಂತಗಳು ಸಂಭವಿಸುತ್ತಿವೆ, ಅದು ‘ಸಾವಿನ ಹೆದ್ದಾರಿ’ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಮತ್ತೆ ಅಪಘಾತಗಳು ಸಂಭವಿಸದಂತೆ ತಡೆಯಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: 8 deaths -Hubli –accident- Former CM –HD Kumaraswamy- condolences.