ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಕೇಸ್ : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

Promotion

ನವದೆಹಲಿ,ಆಗಸ್ಟ್,25,2022(www.justkannada.in): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ  ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಪ್ರಧಾನಿ ಪರಿಹಾರ ನಿಧಿಯಿಂಧ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.

ಇನ್ನು ಘಟನೆಯಿಂದ ಎಚ್ಚೆತ್ತ ಕಳ್ಳಂಬೆಳ್ಳ ಪೊಲೀಸರು ಬೆಂಗಳೂರಿಗೆ ತೆರಳುತ್ತಿರುವ ಕ್ರೂಸರ್ ಗಳನ್ನ ತಡೆದು ತಪಾಸಣೆ ನಡೆಸುತ್ತಿದ್ದಾರೆ.

Key words: 9 people -died – Tumkur- accident-PM Modi- compensation