ಕರ್ನಾಟಕಕ್ಕೆ 941.04 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದ  ಕೇಂದ್ರ ಸರ್ಕಾರ

Promotion

 ನವದೆಹಲಿ,ಮಾರ್ಚ್,13,2023(www.justkannada.in) ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ  ಕರ್ನಾಟಕಕ್ಕೆ 941.04 ಕೋಟಿ ರೂ. ಹೆಚ್ಚುವರಿ ಅನುದಾನವನ್ನ ಕೇಂದ್ರ ಸರ್ಕಾರ ಘೋಷಿಸಿದೆ.

ಎನ್ ಡಿಆರ್ ಎಫ್ ಅಡಿಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ  941.04 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಐದು ರಾಜ್ಯಗಳಿಗೆ ಒಟ್ಟು 1,816.162 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

2022ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘಸ್ಫೋಟ ಮತ್ತಿತರ ಪ್ರಾಕೃತಿಕ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಈ ಅನುದಾನ ಘೋಷಣೆ ಮಾಡಲಾಗಿದೆ.  ಅಸ್ಸಾಂಗೆ 520.466 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 239.3 ಕೋಟಿ ರೂ, ನಾಗಾಲ್ಯಾಂಡ್​ಗೆ 68.02 ಕೋಟಿ ರೂ. ಮೇಘಾಲಯಕ್ಕೆ 47.326 ಕೋಟಿ ರೂ,  ಅನುದಾನ ಘೋಷಣೆ ಮಾಡಲಾಗಿದೆ.

Key words: 941.04 crore – Karnataka- Additional- grant- announced – Central Govt