ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಗೆ ಎಬಿವಿಪಿ ಮನವಿ.

ಬೆಂಗಳೂರು,ಆಗಸ್ಟ್,9,2021(www.justkannada.in): ಕೇಂದ್ರ ಸರಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಈ ಬಗ್ಗೆ ಸಂಘಟನೆಯ ಪದಾಧಿಕಾರಿಗಳು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ಶಿಕ್ಷಣ ನೀತಿಯ ಬಗ್ಗೆ ಕೆಲವರು ಹಬ್ಬಿಸುತ್ತಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕೂಡಲೇ ಇಡೀ ನೀತಿಯ ವಿವರಗಳನ್ನು ರಾಜ್ಯದ ಜನತೆಯ ಮುಂದಿಡಬೇಕು ಎಂದು ಕೋರಿದರು. ಇದಕ್ಕೆ ಸಚಿವರು ಸಮ್ಮತಿಸಿದರು.

ಎಬಿವಿಪಿ ಮಾಡಿರುವ ಎಲ್ಲ ಮನವಿಗಳನ್ನು ಪರಿಶೀಲಿಸಿ ಶೀಘ್ರವೇ ಕ್ರಮ ವಹಿಸಲಾಗುವುದು ಎಂದ ಸಚಿವ ಡಾ.ಅಶ್ವತ್ಥನಾರಾಯಣ್ ಅವರು, ತಮ್ಮನ್ನು ಭೇಟಿ ಮಾಡಿದ ಎಬಿವಿಪಿ ವಲಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರಳಾಪುರ, ರಾಷ್ಟ್ರೀಯ ಕಾರ್ಯದರ್ಶಿ ಹರ್ಷ, ರಾಜ್ಯ ಘಟಕದ ಅಧ್ಯಕ್ಷ ಡಾ.ಸತೀಶ, ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ ಅವರಿಗೆ ಭರವಸೆ ನೀಡಿದರು.

ಇದಲ್ಲದೆ, ಕೋವಿಡ್‌ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿರುವ ಖಾಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕು, ಸರಕಾರಿ ಕಾಲೇಜುಗಳಲ್ಲಿಯೂ ಪದವಿ ಪ್ರವೇಶ ಪ್ರಕ್ರಿಯೆ ಆರಂಭ ಮಾಡಬೇಕು, ಕಾಲೇಜು ಗ್ರಂಥಾಲಯಗಳಿಗೆ ನೀಡುತ್ತಿರುವ ಅನುದಾನವನ್ನು ಬಿಡುಗಡೆ ಮಾಡಬೇಕು, ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಶಾರೀರಕ ತರಬೇತಿಗಾಗಿ ಪ್ರತಿ 50 ವಿದ್ಯಾರ್ಥಿಗಳಿಗೆ ಒಬ್ಬರಂತೆ ತರಬೇತಿದಾರರನ್ನು ನೇಮಕ ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಡಾ.ಅಶ್ವತ್ಥನಾರಾಯಣ ಅವರು, ಈಗಾಗಲೇ ಈ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ENGLISH SUMMARY….

ABVP demands complete implementation of NEP

Bengaluru: The ABVP has demanded the complete implementation of the National Educational Policy and to provide complete details to the general public regarding this policy.

In a memorandum submitted to Dr.C.N.Ashwath Narayan, the minister for higher education, on Monday, the organization has urged to waive the fee of students studying in government colleges considering the financial difficulties caused due to Covid-19 pandemic.

It also suggested that departments of social welfare, Backward Classes & Minority Development, Women & Child Welfare and Transport should work in coordination with regard to working of hostels and providing scholarships and the government should give immediate approval to make appointments for vacant posts in government and aided colleges.

It has also been urged to introduce uniform admission procedures for both private and state-run universities, to release the grant for libraries of colleges, and to provide E-Library facility & online study materials for students.

It has demanded to give priority to sports and fitness of students by appointing physical education instructors as per the ratio of 1 PE instructor for every 50 students.

Dr. Satisha, President, State Unit, Prateeka Mali, State general secretary, Swamy Maralapura, Zonal organizing secretary were present.

Key words: ABVP- appeals – higher education-minister Ashwath Narayan – implement- national education policy