ಎಸಿಬಿ ಬಲೆಗೆ ಮೈಸೂರು ಆರ್’ಟಿಒ ಇನ್ಸ್’ಪೆಕ್ಟರ್

Promotion

ಮೈಸೂರು: ಸಾರಿಗೆ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.

ಲಂಚ ಸ್ವೀಕಾರ ಮಾಡುವಾಗ ಎಸಿಬಿ ಪೊಲೀಸರ ಬಲೆಗೆ ಸಾರಿಗೆ ಅಧಿಕಾರಿ ಬಿದ್ದಿದ್ದಾರೆ. ಆರ್ ಟಿ ಓ ಪಶ್ಚಿಮ ವಿಭಾಗದ ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಇನ್ಸ್ಪೆಕ್ಟರ್ ಪ್ರಭಾಕರ್, ಆತನ ಸಹಾಯಕ ಮಹೇಶ್ ಸಿಕ್ಕಿಬಿದ್ದಿದ್ದಾರೆ.

77000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರೈವಿಂಗ್ ಸ್ಕೂಲ್ ನವರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಎಸಿಬಿ ಡಿವೈಎಸ್ಪಿ ಪರಶುರಾಮಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.