ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ: ಐವರು ದುರ್ಮರಣ.

Promotion

ಚಿತ್ರದುರ್ಗ,ಸೆಪ್ಟಂಬರ್,11,2023(www.justkannada.in):  ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ  ಈ ಘಟನೆ ನಡೆದಿದೆ.  ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40)‌, ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ಸಾವನ್ನಪ್ಪಿದವರು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್​  ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ,  ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇನ್ನು ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಈ ಕುರಿತು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident-between -government bus –lorry- Five -dead.