ಎಟಿಎಂನಿಂದ ಹಣ ಡ್ರಾ ಮಾಡಿ ಬರುವಾಗ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು…

Promotion

ಮೈಸೂರು,ಮಾರ್ಚ್,17,2021(www.justkannada.in): ಬೈಕ್ ಗಳ ನಡುವೆ ಡಿಕ್ಕಿಯಾಗಿ  ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.accident-bike-rider-dies-on-the-spot-mysore

ಕುವೆಂಪು ನಗರದ ಎಂ ಬ್ಲಾಕ್ ನಲ್ಲಿ ರಾತ್ರಿ ಸುಮಾರು 10.30ರ  ಸಮಯದಲ್ಲಿ ಈ ಘಟನೆ ನಡೆದಿದೆ. ಶ್ರೀರಾಂಪುರ ನಿವಾಸಿ ಗೌತಮ್  ಮೃತ ಬೈಕ್ ಸವಾರ. ಮತ್ತೊಬ್ಬ ಸವಾರ ಕುವೆಂಪುನಗರ ನಿವಾಸಿ ಮನೋಜ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.accident-bike-rider-dies-on-the-spot-mysore

ಎಟಿಎಂ ನಿಂದ ಹಣ ಡ್ರಾ ಮಾಡಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ  ಬೈಕ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident – bike rider -dies -on the spot-mysore