ಕಣಿವೆಗೆ ಬಸ್ ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಮಂದಿ ಸಾವು.

Promotion

ಹಿಮಾಚಲ ಪ್ರದೇಶ,ಜುಲೈ,4,2022(www.justkannada.in):  ಕಣಿವೆಗೆ ಬಸ್ ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು,  ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಜಂಗ್ಲಾ ಗ್ರಾಮದ ಬಳಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿ 40ರಿಂದ 45 ಮಂದಿ ಇದ್ದರು ಎನ್ನಲಾಗಿದೆ.

ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ  ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

Key words: accident-bus-death 16-Himachal pradesh