ಮೈಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು….

Promotion

ಮೈಸೂರು,ಜು,8,2019(www.justkannada.in):  ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ  ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಅರಸು ರಸ್ತೆ – ಮಹಾರಾಣಿ ಕಲಾ ಕಾಲೇಜು ವೃತ್ತದ ಬಳಿ ಈ ಘಟನೆ  ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Key words:  accident –Mysore-Bike rider- death- on the spot.