ಸರ್ಕಾರದ ವಿರುದ್ದ ಭ್ರಷ್ಟಾಚಾರ ಆರೋಪ: ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಚಿವ ಸಿ.ಟಿ ರವಿ ತಿರುಗೇಟು….

Promotion

ಬೆಂಗಳೂರು,ಜು,8,2020(www.justkannada.in): ಕೊರೋನಾ ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ  ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.jk-logo-justkannada-logo

ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ್ದಾರೆ. ಸುಳ್ಳನ್ನೇ ತಮ್ಮ ಮನೆ ದೇವರನ್ನಾಗಿ ಮಾಡಿಕೊಂಡಿದ್ದಾರೆ. ಬರೀ ಇಂತಹ ಸುಳ್ಳುಗಳನ್ನೇ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯಗೆ ಸಚಿವ ಸಿ.ಟಿ ರವಿ ಟಾಂಗ್ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಟಿ ರವಿ, ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡ ಕಾಂಗ್ರೆಸ್ ನವರು ಬರೀ ಇಂತಹ ಸುಳ್ಳುಗಳನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ. ಕೊರೋನಾ ಬಂದ ಹೊಸದರಲ್ಲಿ ಸರ್ಜಿಕಲ್ ಮಾಸ್ಕ್ ಗಳು ಮಾತ್ರಾ ಇದ್ದವು. ಅಂತಹ ಸಂಧರ್ಭದಲ್ಲಿ ಬೇರೆ ಕಡೆಯಿಂದ ಮಾಸ್ಕ್ ಮತ್ತು ಪಿಪಿಇ ಕಿಟ್ ಖರೀದಿ ಮಾಡುವುದು ಅನಿವಾರ್ಯವಾಗಿತ್ತು. ಆದರೆ ಇದರಲ್ಲಿ ಹುಳುಕು ಹುಡುಕೋದು ಸರಿಯಲ್ಲ ಎಂದು ಕಿಡಿಕಾರಿದರು.accused-corruption-against-government-former-cm-siddaramaiah-minister-ct-ravi

ಅನ್ ಲೈನ್ ಶಿಕ್ಷಣ ರದ್ಧು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸಿ.ಟಿ ರವಿ, ಆನ್ ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಮಿತಿ ವರದಿ ಕೊಟ್ಟಿದೆ. ತಜ್ಞರ ಜೊತೆ ಸಮಾಲೋಚನೆ ನಡೆಸಿ ಪೋಷಕರ ಅಭಿಪ್ರಾಯ ಸಂಗ್ರಹ ಮಾಡಬೇಕು. ಬಳಿಕ ಈ ಬಗ್ಗೆ ಸಚಿವರು ನಿರ್ಧಾರ ಮಾಡಲಿದ್ದಾರೆ ಎಂದು ತಿಳಿಸಿದರು.

Key words: Accused -corruption -against – government-Former CM -Siddaramaiah – Minister- CT Ravi.