ಸರ್ಕಾರದ ಆದೇಶ ಮೀರಿ ತರಗತಿ ಆರಂಭಿಸುವ ಖಾಸಗಿ ಶಾಲೆಗಳ ವಿರುದ್ದ ಕ್ರಮ- ಶಿಕ್ಷಣ ಸಚಿವ ಸುರೇಶ್ ಕುಮಾರ್…

ಬೆಂಗಳೂರು, ಮಾರ್ಚ್,12,2021(www.justkannada.in): ಸರ್ಕಾರದ ಆದೇಶ ಮೀರಿ 1 ರಿಂದ 5ನೇ ತರಗತಿಯನ್ನು ಆರಂಭಿಸುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್,  1ರಿಂದ 5 ನೇ ತರಗಿ ಆರಂಭಕ್ಕೆ ಆರೋಗ್ಯ ಇಲಾಖೆ ಅನುಮತಿ ನೀಡಿಲ್ಲ. ಕೆಲ ಖಾಸಗಿ ಶಾಲೆಗಳು ಸರ್ಕಾರದ ಆದೇಶ ಮೀರಿ 1 ರಿಂದ 5ನೇ ತರಗತಿ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.Action -against -private schools- opening –class-  government –education Minister -Suresh Kumar.

ಸರ್ಕಾರದ ಅನುಮತಿ ಇಲ್ಲದಿದ್ದರೂ ಕೆಲ ಖಾಸಗಿ ಶಾಲೆಗಳು 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ.  ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಟ್ವೀಟ್ ಮಾಡಿ ಮನವಿ ಮಾಡಿ ಸಲ್ಲಿಸಿದ್ದರು.

Key words: Action -against -private schools- opening –class-  government –education Minister -Suresh Kumar.