ಅಫ್ಘಾನಿಸ್ತಾನ ವಿದ್ಯಾರ್ಥಿಗಳ ವೀಸಾ ವಿಸ್ತರಣೆಗೆ ಕ್ರಮ- ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.

ಮೈಸೂರು,ಆಗಸ್ಟ್,19,2021(www.justkannada.in):  ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದರಿಂದ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ  ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಜಿ.ಹೇಮಂತ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಮೈಸೂರು ವಿವಿಯಲ್ಲಿ 90 ಅಫ್ಘಾನಿಸ್ತಾನ ದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರೆಲ್ಲರೂ ಎರಡು ತಿಂಗಳಲ್ಲಿ ಪರೀಕ್ಷೆ ಮುಗಿಸಿ ತಮ್ಮ ದೇಶಕ್ಕೆ ತೆರಳಬೇಕಿತ್ತು. ಆದರೆ, ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದೇಶಾಂಗ ಇಲಾಖೆಯೊಂದಿಗೆ ಮಾತುಕತೆ ನಡೆಸಿ ವೀಸಾ ವಿಸ್ತರಣೆ ಮಾಡಲಾಗುವುದು. ಈ ಹಿಂದೆ ಕೊರೊನಾ ಸಮಯದಲ್ಲೂ ಚೀನಾ ವಿದ್ಯಾರ್ಥಿಗಳಿಗೂ 6 ತಿಂಗಳ ಕಾಲ ತಾತ್ಕಾಲಿಕವಾಗಿ ವೀಸಾ ವಿಸ್ತರಣೆ ಮಾಡಲಾಗಿತ್ತು ಎಂದು ತಿಳಿಸಿದರು.

Key words: Action – extend –Afghanistan- student –visa-Mysore university-VC- Prof G Hemanth Kumar.