ಶಬ್ದಮಾಲಿನ್ಯ ನಿಯಂತ್ರಣಕ್ಕೆ ಕ್ರಮ:  ಕೋರ್ಟ್ ಆದೇಶ ಪಾಲಿಸದಿದ್ದರೇ ಕಟ್ಟುನಿಟ್ಟಿನ ಕ್ರಮ- ಗೃಹ ಸಚಿವ ಅರಗ ಜ್ಞಾನೇಂದ್ರ.

kannada t-shirts

ಬೆಂಗಳೂರು,ಮೇ,9,2022(www.justkannada.in):  ಮಸಿದಿಗಳಲ್ಲಿನ ಮೈಕ್ ತೆರವಿಗೆ ಆಗ್ರಹಿಸಿ ಆಜಾನ್ ವಿರುದ್ಧ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ, ಮಂತ್ರಪಠಣಗಳು ಆರಂಭವಾಗಿದ್ದು, ಈ ಸಂಬಂಧ ಶಬ್ದಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೋರ್ಟ್ ಆದೇಶ ಪಾಲಿಸದಿದ್ದರೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,  ನ್ಯಾಯಾಯಲಯ ಆದೇಶವನ್ನು ಎಲ್ಲರೂ ಪಾಲಿಸಬೇಕು. ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಬ್ದಮಾಲಿನ್ಯ ನಿಯಂತ್ರಿಸಲು ಕೋರ್ಟ್ ಆದೇಶವಿದ್ದು,  ಕೋರ್ಟ್ ಆದೇಶವನ್ನು ಎಲ್ಲರೂ ಪಾಲೀಸಬೇಕು. ನ್ಯಾಯಾಲಯದ ಆದೇಶ ಮೀರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಲ್ಲ ಎಂದರು.

Key words: Action – noise- pollution-control-Home Minister -Araga Jnanendra

website developers in mysore