ನಟ ಚೇತನ್​ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ

Promotion

ಬೆಂಗಳೂರು, ಮಾರ್ಚ್ 05, 2022 (www.justkannada.in): ನಟ ಚೇತನ್​ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಚೇತನ್​ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಬಸವನಗುಡಿ ಠಾಣೆ ಪೊಲೀಸರಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಐಪಿಸಿ ಸೆಕ್ಷನ್ 153 ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಪೊಲೀಸರು ಪತ್ರ ಬರೆದಿದ್ದಾರೆ.

IPC 153 ಅಡಿಯಲ್ಲಿ ಕೇಸ್ ದಾಖಲಾದರೆ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಸರ್ಕಾರದಿಂದ ಅನುಮತಿ ಸಿಕ್ಕ ಕೂಡಲೇ ಚೇತನ್ ಮೇಲೆ ಚಾರ್ಜ್ ಶೀಟ್ ದಾಖಲು ಮಾಡಲಾಗುತ್ತದೆ.