ಆಗಸ್ಟ್’ನಲ್ಲಿ ಚಾಲೆಂಜಿಂಗ್ ಸ್ಟಾರ್ ‘ಗಂಡುಗಲಿ ಮದಕರಿ ನಾಯಕ’ ಚಿತ್ರೀಕರಣ ಶುರು !

ಬೆಂಗಳೂರು, ಜೂನ್ 12, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷೆಯ ಮತ್ತು ಬಾರಿ ಕುತೂಹಲ ಮೂಡಿಸಿರುವ ‘ಗಂಡುಗಲಿ ಮದಕರಿ ನಾಯಕ’ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.

ಸಾಕಷ್ಟುಕುತೂಹಲ ಮೂಡಿಸಿರುವ ‘ಗಂಡುಗಲಿ ಮದಕರಿ ನಾಯಕ’ ಸಿನಿಮಾ ಚಿತ್ರೀಕರಣ ಆಗಸ್ಟ್ ನಿಂದ ಪ್ರಾರಂಭವಾಗಲಿದೆಯಂತೆ. ಈಗಾಗಲೆ ಸ್ಯಾಂಡಲ್ ವುಡ್ ನಲ್ಲಿ ಈ ಚಿತ್ರ ಬಾರಿ ಸದ್ದು ಮಾಡುತ್ತಿದೆ.

ದರ್ಶನ್ ಸದ್ಯ ‘ರಾಬರ್ಟ್’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಬಾರಿ ಸದ್ದು ಸುದ್ದಿ ಮಾಡುತ್ತಿರುವ ‘ರಾಬರ್ಟ್’ ಮೊದಲ ಹಂತದ ಚಿತ್ರೀಕರಣ ಮುಗಿಸಿ ಎರಡನೆ ಹಂತದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.