ಇಂದು ಅಂಬಿ ಪುಣ್ಯಸ್ಮರಣೆ: ರೆಬೆಲ್ ಸ್ಟಾರ್ ನೆನೆದು ಕಣ್ಣೀರಾದ ದಚ್ಚು

Promotion

ಬೆಂಗಳೂರು, ನವೆಂಬರ್ 24, 2020 (www.justkannada.in): ಇಂದು ಅಂಬರೀಶ್ ಅವರ 2ನೇ ವರ್ಷದ ಪುಣ್ಯಸ್ಮರಣೆ.

ಇಂದಿಗೆ ಸರಿಯಾಗಿ ಎರಡು ವರ್ಷಗಳ ಹಿಂದೆ ಅಂದರೆ ನವೆಂಬರ್ 24, 2018ರಲ್ಲಿ ನಟ ರೆಬಲ್ ಸ್ಟಾರ್ ಅಂಬರೀಶ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದರು.

ಅಂಬರೀಶ್ ಅವರ ಪ್ರೀತಿಯ ದರ್ಶನ್, 2ನೇ ವರ್ಷದ ಪುಣ್ಯಸ್ಮರಣೆ ದಿನ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿರುವ ದರ್ಶನ್, ‘ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ ೨ ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ.’ ಎಂದು ಬರೆದುಕೊಂಡಿದ್ದಾರೆ.

ಜೊತೆಗೆ ಸುಂದರವಾದ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ದರ್ಶನ್, ಅಂಬರೀಶ ಕೈ ಹಿಡಿದು ಕುಳಿತಿರುವ ಫೋಟೋವನ್ನು ಹೊಂಚಿಕೊಂಡಿದ್ದಾರೆ.