‘ಗುರುದೇವ ಹೊಯ್ಸಳ’ ಅವತಾರದಲ್ಲಿ ಡಾಲಿ ! 25ನೇ ಸಿನಿಮಾ ಮೈಸೂರಿನಲ್ಲಿ ಶೂಟಿಂಗ್

Promotion

ಬೆಂಗಳೂರು, ಜುಲೈ 05, 2022 (www.justkannada.in): ನಟ ‘ಡಾಲಿ’ ಧನಂಜಯ್‌ ನಟನೆಯ 25ನೇ ಸಿನಿಮಾ ‘ಹೊಯ್ಸಳ’ದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.

ಧನಂಜಯ್‌ ಅವರು ಈ ಚಿತ್ರದಲ್ಲಿ ‘ಗುರುದೇವ ಹೊಯ್ಸಳ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕೆ ವಿಜಯ್ ನಾಗೇಂದ್ರ ಆಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಈ ನಡುವೆ ಚಿತ್ರತಂಡವು ಧನಂಜಯ್‌ ಅವರ ಫಸ್ಟ್‌ಲುಕ್‌ ಬಿಡುಗಡೆಗೊಳಿಸಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಇತರರು ಚಿತ್ರದಲ್ಲಿ ನಟಿಸುತ್ತಿದ್ದಾರೆ.