ನಟ ದಿ.ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ : ನಟ ಅನಿರುದ್ಧ ಪ್ರತಿಕ್ರಿಯಿಸಿದ್ದು, ಹೀಗೆ…!

Promotion

ಬೆಂಗಳೂರು,ಡಿಸೆಂಬರ್,26,2020(www.justkannada.in):  ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಒತ್ತಾಯಿಸಿದ್ದಾರೆ.Teachers,solve,problems,Government,bound,Minister,R.Ashok

ನಟ ದಿ.ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಮಾಡಿರುವುದು ಬೇಸರ ತಂದಿದೆ. ಆದರೆ, ಈ ವಿಷಯವನ್ನು ಮುಂದುವರಿಸುವುದು ಬೇಡ. ಸಮಾಜದಲ್ಲಿ ಪ್ರೀತಿ ಬೆಳೆಯಬೇಕೆ ಹೊರತು ದ್ವೇಷವಲ್ಲ. ಮುಂದೆ ಇಂಥಹ ಕೃತ್ಯ ಮರುಕಳಿಸಬಾರದು. ಹಾಗಾಗಿ, ಕಿಡಿಗೇಡಿಗಳನ್ನು ಪತ್ತೆ ಮಾಡಿ ಶಿಕ್ಷಿಸಬೇಕು ಎಂದಿದ್ದಾರೆ.

 actor-Dr.Vishnuvardhan-Statue-wreck-Actor- Anirudha-Responded

ಇನ್ನು ಸಚಿವ ವಿ.ಸೋಮಣ್ಣ ಅವರು ಕರೆ ಮಾಡಿ ಬೇರೆ ಸ್ಥಳದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

key words : actor-Dr.Vishnuvardhan-Statue-wreck-Actor- Anirudha-Responded