ನಟ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳು: ಅಭಿಮಾನಿಗಳಿಂದ ಆಕ್ರೋಶ….

ಬೆಂಗಳೂರು,ಡಿಸೆಂಬರ್,26,2020(www.justkannada.in):  ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಯಾರೋ ದುಷ್ಕರ್ಮಿಗಳು ಧ್ವಂಸ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Teachers,solve,problems,Government,bound,Minister,R.Ashok

ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ  ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನ ಧ್ವಂಸ ಮಾಡಲಾಗಿದೆ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳಕ್ಕೆ ವಿಷ್ಣುವರ್ಧನ್ ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿದ್ದಾರೆ.actor-dr-vishnuvardhan-statue-wreck-outrage-fans

ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಿಡಿಗೇಡಿ ಪತ್ತೆಗೆ ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಕಿಡಿಗೇಡಿಗಳು ವಿಷ್ಣುವರ್ಧನ್ ಅವರ ಪ್ರತಿಮೆಯನ್ನ ಹೊತ್ತೊಯ್ದಿದ್ದರು. ಇದೀಗ  ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಗೆ ನಾಲ್ಕು ದಿನ ಬಾಕಿ ಇರುವಾಗಲೇ ಈ ಕೃತ್ಯವೆಸಗಿದ್ದಾರೆ.

Key words: Actor – Dr Vishnuvardhan -Statue –wreck-Outrage -fans.

ENGLISH SUMMARY

Miscreants wreck matinee idol Dr. Vishnuvardhan’s bust: Fans protest
Bengaluru, Dec. 26, (www.justkannada.in): In an incident, miscreants have wrecked the bust of Kannada matinee idol Dr. Vishnuvardhan in Bengaluru, triggering ire among the fans, who staged a protest condemning the act.
A bust of Dr. Vishnuvardhan, near Magadi road toll gate, has been wrecked by some miscreants during night hours. Fans of the matinee idol staged a demonstration condemning the act and demanded to find out the culprits at the earliest and punish them.
Keywords: Dr. Vishnuvardhan/ Bust/ Wrecked/ fans protest