ನಟ ಜಗ್ಗೇಶ್ ಪುತ್ರನ ಕಾರು ಅಪಘಾತ.

Promotion

ಚಿಕ್ಕಬಳ್ಳಾಪುರ, ಜುಲೈ,1,2021(www.justkannada.in):  ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು  ಅಪಘಾತಕ್ಕೀಡಾಗಿರುವ ಘಟನೆ ಇಂದು 12 ಗಂಟೆಯ ವೇಳೆ ನಡೆದಿದೆ.jk

ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಬಳಿ ಈ ಘಟನೆ ನಡೆದಿದೆ.  ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಜಗ್ಗೇಶ್ ಪುತ್ರ ಗುರುರಾಜ್ ಅವರ ಬಿಎಂಡಬ್ಲ್ಯು ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.

ಇನ್ನು ಘಟನೆಯಲ್ಲಿ ಗುರುರಾಜ್ ಅದೃಷ್ಟವಶತ್  ಅಪಾಯದಿಂದ ಪಾರಾಗಿದ್ದಾರೆ. ಗುರುರಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Actor- Jaggesh- son -Gururaj – car accident