ಇಂದಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ.  

Promotion

ಬೆಂಗಳೂರು,ಏಪ್ರಿಲ್,19,2023(www.justkannada.in): ರಾಜ್ಯ ವಿಧಾನಸಭಾ ಚುನಾವಣಾ ಕಾವು ಹೆಚ್ಚಾಗಿದ್ದು,   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಪರವಾಗಿ ನಟ ಕಿಚ್ಚ ಸುದೀಪ್ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಡೆಯುವ ರೋಡ್​ ಶೋನಲ್ಲಿ ನಟ ಸುದೀಪ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸಿಎಂ ಬೊಮ್ಮಾಯಿ ಮತಬೇಟೆ ಮತಯಾಚಿಸಲಿದ್ದಾರೆ.

ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಹೀಗಾಗಿ ಪಟ್ಟಣದ ಚೆನ್ನಮ್ಮ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ. 4 ಕೆ.ಎಸ್ ಆರ್ ಪಿ, 3 ಡಿ.ಎಸ್ ಪಿ 250ಕ್ಕೂ ಅಧಿಕ ಪೊಲೀಸ್ ನಿಯೋಜನೆ ಮಾಡಲಾಗಿದೆ.

Key words: Actor -Kiccha Sudeep – campaigning -CM Basavaraj Bommai – today.