ನ.1ರಂದು ನಟ ದಿ.ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ.

ಬೆಂಗಳೂರು,ಅಕ್ಟೋಬರ್,20,2022(www.justkannada.in): ನವೆಂಬರ್ 1 ರಂದು ನಟ ದಿ. ಪುನೀತ್ ರಾಜ್ ​ಕುಮಾರ್ ​ಗೆ ಕರ್ನಾಟಕ ರತ್ನ ಪ್ರಶಸ್ತಿ  ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತೇವೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ನಟ ಪುನೀತ್ ಅವರು ಉಳಿಯಬೇಕು. ಅವರು ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ  ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ.  ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Actor -Punith Rajkumar- award-  Karnataka Ratna – November 1.