ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯಾತೀಗಣ್ಯರು.

ಬೆಂಗಳೂರು,ಅಕ್ಟೋಬರ್,29,2021(www.justkannada.in): ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಇಹಲೋಕ ತ್ಯೆಜಿಸಿದ  ಕನ್ನಡ ಖ್ಯಾತ ನಟ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿ ಗಣ್ಯಾತೀಗಣ್ಯರು ಕಂಬನಿ ಮಿಡಿದಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಕನ್ನಡ ಚಿತ್ರರಂಗವೇ ಕಣ್ಣೀರ ಕಡಲಲ್ಲಿ ಮುಳುಗಿದೆ. ಈ ಮಧ್ಯೆ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.  ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ. ಅವರ ನಟಿಸ್ಸಿದ್ದ ಪೃಥ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯ ವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದಿದ್ದಾರೆ.

ಹಾಗೆಯೇ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕನ್ನಡದ ಪ್ರತಿಭಾವಂತ ಯುವನಟ ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ಧ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನನ್ನು ಕಳೆದುಕೊಂಡ ಶೋಕ.  ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

ಹಾಗೆಯೇ ಅಪ್ಪು ನಿಧನಕ್ಕೆ ಕಂಬಮಿ ಮಿಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೋಯ್ದ ವಿಧಿ ಬಹಳ ಕ್ರೂರಿ. ಪುನೀತ್ ಅವರ ಅಗಲಿಕೆ ಕೇವಲ ಚಿತ್ರರಂಗಕ್ಕಷ್ಟೇ ಅಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗಷ್ಟೇ ಅಲ್ಲ, ಇಡೀ ನಾಡಿಗೇ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿರುವ ಸಚಿವ ಎಸ್.ಟಿ.ಸೋಮಶೇಖರ್ , ಈ ನಾಡು ಕಂಡ ಅಪ್ರತಿಮ‌ ನಟ, ಕನ್ನಡಿಗರ ಕಣ್ಮಣಿ, ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿರುವ ಸಚಿವ ಕೆ ಎಸ್ ಈಶ್ವರಪ್ಪ, “ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಕನ್ನಡ ಚಲನಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿರುವುದು ದುಃಖಕರ ಸಂಗತಿ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಸಚಿವ ಕೆ ಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.

ಅಪ್ಪು ನಿಧನಕ್ಕೆ  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಂಬನಿ ಮಿಡಿದಿದ್ದಾರೆ. ಜನಪ್ರಿಯ ನಟ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ’ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ದುಃಖಿಸಿದ್ದಾರೆ. ರಚನಾತ್ಮಕ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತಿದ್ದ ಪುನೀತ್ ಅವರು ಇನ್ನಿಲ್ಲವೆಂದರೆ ನಂಬುವುದು ಕಷ್ಟವಾಗುತ್ತದೆ. ಅವರ ಸ್ಥಾನವನ್ನು ಬೇರೆ ಯಾರಿಂದಲೂ ತುಂಬುವುದು ಸಾಧ್ಯವಿಲ್ಲ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರ ನಿಧನದ ನೋವನ್ನು ತಡೆದುಕೊಳ್ಳುವಂತಹ ಶಕ್ತಿಯನ್ನು ಭಗವಂತನು ಅವರ ಕುಟುಂಬದ ಸದಸ್ಯರಿಗೆ, ಬಂಧುಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ನೀಡಲಿ; ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

 

Key words: Actor- Punith Rajkumar-death- Condolences

ENGLISH SUMMARY…

Dignitaries mourn actor Puneeth Rakumar’s demise
Bengaluru, October 29, 2021 (www.justkannada.in): Several dignitaries including former Prime Minister H.D. Devegwoda have expressed their grief over the untimely demise of popular Kannada cine actor, power star Puneeth Rajkumar.
Puneeth Rajkumar suffered a massive heart attack and was admitted to the Vikram Hospital in Bengaluru where he passed away. The entire Sandalwood industry was in deep grief following his demise.
Former PM H.D. Devegowda in his message has said that he is shocked over the news of the death of ‘Yuvarathna Puneeth Rajkumar’. “I had watched his two movies ‘Prithvi’ and ‘Rajakumara, along with him. It is indeed unbelievable to know that he is not more. The entire state has suffered a huge loss due to his death. May his soul rest in peace,” he said.
In his tweet, former Chief Minister Siddaramaiah has mentioned, “I am indeed shocked over the sudden demise of young film star Puneeth Rajkumar. I share a very close relationship with his family from Dr. Rajkumar’s days. For me his death makes me feel like I have lost one of my family members.”
KPCC President D.K. Shivakumar has said, “Puneeth was my neighbor, and I just can’t digest to know that he is no more. Fate is so cruel for snatching him away from his at just a young age. It is not just a loss to the film industry but for the entire state. I pray god humbly to provide the strength to bear this shock not only for his family members for crores of his fans.”
Cooperation Minister S.T. Somashekar in his message has mentioned that Puneeth was one of the versatile actors. “It is a huge shock for me to know that he is no more. Not only for the Sandalwood industry, but this is also a great loss for the entire Indian film industry and a black day for Karnataka. He always used to support and lend his voice whenever it comes to the Kannada language, land, and water. I pray to god to give the strength to bear his loss.”
Keywords: Puneeth Rajkumar/ demise/ dignitaries/ grief