ನಟ ಸಂಚಾರಿ ವಿಜಯ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸೇರಿ ಗಣ್ಯರಿಂದ ಸಂತಾಪ.

Promotion

ಬೆಂಗಳೂರು,ಜೂನ್,15,2021(www.justkannada.in) ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮಂಗಳವಾರ ನಸುಕಿನ ಜಾವ 3.30ಕ್ಕೆ ಮೃತಪಟ್ಟಿದ್ದಾರೆ.jk

ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದ್ದು, ಕಲಾವಿದರು, ಗಣ್ಯಾತಿಗಣ್ಯರು ಆಗಮಿಸಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಟ ಶಿವರಾಜ್ ಕುಮಾರ್, ನಾಗತೀಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿ ಚಂದ್ರು, ವೈಎಸ್ ವಿ ದತ್ತಾ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.

ನಟ ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿರುವ ನಟ ಶಿವರಾಜ್ ಕುಮಾರ್, ಕಿಲ್ಲಿಂಗ್ ವೀರಪ್ಪನ್ ಚಿತ್ರದಲ್ಲಿ ಜತೆಯಾಗಿ ನಟಿಸಿದ್ದವು. 12 ದಿನಗಳ ಕಾಲ ಚಿತ್ರೀಕರಣದಲ್ಲಿ ವಿಜಯ್ ಭಾಗಿಯಾಗಿದ್ದರು.  ವಿಜಯ್ ಗೆ ಸಹಾಯ ಮಾಡುವ ಮನೋಭಾವವಿತ್ತು. ಸಾವಿನಲ್ಲೂ ಅಂಗಾಂಗ ದಾನ ಮಾಡಿರುವುದು ಇದಕ್ಕೆ ನಿದರ್ಶನ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನ ದೇವರು ನೀಡಲಿ ಎಂದು ಹೇಳಿದರು.

ಇಂದು ವಿಜಯ್  ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

Key words:  actor- sanchari Vijay-death-: Actor -Shivraj Kumar- condoles