ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ- ವೈದ್ಯರಿಂದ ಮಾಹಿತಿ.

Promotion

ಬೆಂಗಳೂರು,ಜೂನ್,14,2021(www.justkannada.in):  ಬೈಕ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಅಪೊಲೋ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯ ಅರುಣ್ ನಾಯ್ಕ್ ತಿಳಿಸಿದ್ದಾರೆ.jk

ನಟ ಸಂಚಾರಿ ವಿಜಯ್ ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಕ್ಷಣ ಕ್ಷಣಕ್ಕೂ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತಕ್ಕೀಡಾಗಿರುವ ನಟ ಸಂಚಾರಿ ವಿಜಯ್ ರ  ಮೆದುಳಿನಲ್ಲಿ ರಕ್ತಸ್ರಾವವಾಗಿರುವುದರಿಂದ ಈಗಾಗಲೇ ಶಸ್ರಚಿಕಿತ್ಸೆ ಮಾಡಲಾಗಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆ. ಈ ನಡುವೆ ಇಂದು ಮುಂಜಾನೆ 5 ಗಂಟೆಗೆ ವಿಜಯ್ ಗೆ ಬ್ರೇನ್ ಸ್ಟ್ರೋಕ್ ಆಗಿದ್ದು, ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

 

Key words: Actor- Sanjay Vijay- health -condition –  Information -doctors.