ನಟ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ನಟ ಶಿವರಾಜ್ ಕುಮಾರ್ ವಿಷಾದ.

Promotion

ಬೆಂಗಳೂರು,ಡಿಸೆಂಬರ್,19,2022(www.justkannada.in): ನಟ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ಸಂಬಂಧಿಸಿದಂತೆ  ನಟ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ನಟ ಶಿವಣ್ಣ, ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಕಲಾವಿದರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು.  ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ,  ದ್ವೇಷ ಅಗೌರವವನ್ನಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.  ಈ ಮಧ್ಯೆ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ನಟ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು.

Key words: Actor- Shivaraj Kumar –regrets-shoe -actor -Darshan.