ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ: ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ಅಭಿಮಾನಿಗಳು…

Promotion

ಮೈಸೂರು,ಜನವರಿ,4,2021(www.justkannada.in):  ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.jk-logo-justkannada-mysore

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ತಾಯಿ ಚಾಮುಂಡಿಯ ದರ್ಶನ ಪಡೆದರು.  ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ.actor-sudeep-visits-chamundi-hill-mysore

ತಮ್ಮ ನೆಚ್ಚಿನ ನಟ ಚಾಮುಂಡಿ ಬೆಟ್ಟಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದು  ನಟ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದರು. ಈ ವೇಳೆ ಸುದೀಪ್ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದರು. ದೇವಸ್ಥಾನದಲ್ಲೂ ಸಹ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳಿಟ್ಟು ಅಭಿಮಾನಿಗಳಿಗೆ  ಸುದೀಪ್ ಸನ್ನೆ ಮಾಡಿದರು. ಇನ್ನು ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು.actor-sudeep-visits-chamundi-hill-mysore

Key words: Actor – Sudeep-visits- Chamundi hill – Mysore.