ಸಿಸಿಬಿ ವಿಚಾರಣೆಗೆ ಹಾಜರಾದ ನಟಿ ರಾಧಿಕಾ ಕುಮಾರಸ್ವಾಮಿ…

ಬೆಂಗಳೂರು,ಜನವರಿ,8,2021(www.justkannada.in):  ವಂಚಕ ಯುವರಾಜ್ ಜತೆ ಹಣಕಾಸಿನ ವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.jk-logo-justkannada-mysore

ಸಹೋದರನ ಜತೆ ನಟಿ ರಾಧಿಕಾ ಕುಮಾರಸ್ವಾಮಿ  ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗಿದ್ದು ವಿಚಾರಣೆ ಶುರುವಾಗಿದೆ. ಇನ್ನು ನಟಿ ರಾಧಿಕಾ ಕುಮಾರಸ್ವಾಮಿ ಅವರ ಮೊಬೈಲ್ ಫೋನ್ ಅನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. Actress- Radhika Kumaraswamy -attending -CCB -hearing.

ವಂಚನೆ ಕೇಸ್ ನಲ್ಲಿ ಬಂಧಿತ ಯುವರಾಜ್ ನಿಂದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಂದು ಕೋಟಿ ರೂ ಹಣ ವರ್ಗಾವಣೆಯಾಗಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನಿನ್ನೆಯೇ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದರು.

Key words: Actress- Radhika Kumaraswamy -attending -CCB -hearing.