ಟ್ವಿಟ್ಟರ್, ಇನ್ಸ್ಟಾಗ್ರಾಂನಿಂದ ಮತ್ತೆ ದೂರಾದ ರಮ್ಯ

Promotion

ಬೆಂಗಳೂರು, ಮಾರ್ಚ್ 18, 2021 (www.justkannada.in): ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಇದ್ದಕ್ಕಿದಂತೆ ರಮ್ಯಾ ತಮ್ಮ ಟ್ವಿಟ್ಟರ್, ಇನ್‌ಸ್ಟಾಗ್ರಾಂ ಖಾತೆಗಳನ್ನು ನಟಿ ರಮ್ಯಾ ನಿಷ್ಕ್ರಿಯಗೊಳಿಸಿದ್ದಾರೆ.

ಅಂದಹಾಗೆ ರಮ್ಯಾ ಆಗಾಗ್ಗೆ ಪ್ರಾಣಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ತಾವು ಮಾಂಸಾಹಾರ ತ್ಯಜಿಸಿದ್ದರ ಬಗ್ಗೆ ಬರೆದುಕೊಂಡಿದ್ದರು.

ಲೋಕಸಭೆ ಚುನಾವಣೆ ಬಳಿಕ ತಮ್ಮ ಎಲ್ಲ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದ ರಮ್ಯಾ ನಂತರ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತ್ಯಕ್ಷವಾಗಿದ್ದರು.