ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ- ಹಾಲುಮತ ಮಹಾಸಭಾದಿಂದ ಮನವಿ…

ಮೈಸೂರು,ಸೆಪ್ಟಂಬರ್,19,2020(www.justkannada.in): ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇಕಡ 9ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಹಾಲುಮತ ಮಹಾಸಭಾದ ಸದಸ್ಯರು ಮನವಿ ಮಾಡಿದರು,add-kuruba-community-scheduled-tribe-mysore-halumatha-mahasabha

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ವಿಜಯಕುಮಾರ್  ಮಾತನಾಡಿ ಕುರುಬ ಸಮಾಜವು ಶೈಕ್ಷಣಿಕವಾಗಿ , ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕೃತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ . ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ,  ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ  ಮೀಸಲಾತಿ ಪಟ್ಟಿಯಲ್ಲಿದೆ ಎಂದರು. .

ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ . ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ . 28 ನೇ ಪಟ್ಟಿಯಲ್ಲಿರುವ ಕುರುಬ, ಇದನ್ನು ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಅದರ ಸಂಬಂಧ ಹಲವು ವರ್ಷಗಳಿಂದ ಜಾಗೃತಿ ಸಭೆಗಳು , ಸಂವಾದಗಳು , ಬೃಹತ್ ಸಮಾವೇಶದಲ್ಲಿನ ನಿರ್ಣಯಗಳನ್ನು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕವೂ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ವಿಜಯ ಕುಮಾರ್ ತಿಳಿಸಿದರು. add-kuruba-community-scheduled-tribe-mysore-halumatha-mahasabha

ಮಾನ್ಯ ಮುಖ್ಯಮಂತ್ರಿಗಳು , ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇಕಡ 9 ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಸುದ್ದಿಗೋಷ್ಟಿಯಲ್ಲಿ ಸಮೃದ್ಧಿ ಸುರೇಶ್, ನಾಗೇಶ್ ಗೌಡ , ಉಮೇಶ್ ಕೋಟೆ, ಶಿವರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: Add –kuruba community – Scheduled Tribe-mysore- halumatha mahasabha