ಆತ್ಮನಿರ್ಭರ ಅಡಿ ಹೆಚ್ಚುವರಿ 600 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ ; ಸಚಿವ ಎಸ್.ಟಿ.ಸೋಮಶೇಖರ್

ದಾವಣಗೆರೆ,ನವೆಂಬರ್,16,2020(www.justkannada.in) ; ಪ್ರತಿವರ್ಷ ಜವಹರಲಾಲ್ ಅವರ ಹುಟ್ಟುಹಬ್ಬದ ಅಂಗವಾಗಿ 7 ದಿನಗಳ ಕಾಲ ಸಹಕಾರ ಸಪ್ತಾಹವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸಹಕಾರ ಕ್ಷೇತ್ರದಿಂದ ಏನೆಲ್ಲ ಬೆಳವಣಿಗೆಗಳಾಗಿವೆ, ಇನ್ನು ಏನು ಮಾಡಲಿದ್ದೇವೆ ಎಂಬುದನ್ನು ಜನರಿಗೆ ತಿಳಿಸುವಂತಹ ಕಾರ್ಯವನ್ನು ನಾವು ಮಾಡಲಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

kannada-journalist-media-fourth-estate-under-loss

67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020 ಕಾರ್ಯಕ್ರಮಕ್ಕಾಗಿ ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆಯಲ್ಲಿ 3ನೇ ದಿನದ ಕಾರ್ಯಕ್ರಮ ನಡೆಯುತ್ತಲಿದೆ. ಈ ಮೂಲಕ ಸಹಕಾರ ಕ್ಷೇತ್ರವನ್ನು ಜನರಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ಕೆಲಸವಾಗುತ್ತದೆ ಎಂದು ಸಚಿವ ಸೋಮಶೇಖರ್ ಹೇಳಿದರು.

15 ಲಕ್ಷ ರೈತರಿಗೆ 9945 ಕೋಟಿ ರೂ. ಸಾಲ

ಕೋವಿಡ್-19ರ ಸಂಕಷ್ಟದ ಸಂದರ್ಭದಲ್ಲಿರೈತರಿಗೆ ಕೃಷಿ ಸಾಲ ಒದಗಿಸಲು ಕೇಂದ್ರ ಸರ್ಕಾರವು “Special Liquidity Facility” ಅಡಿಯಲ್ಲಿ 1700 ಕೋಟಿ ರೂ.ಗಳನ್ನು ನಬಾರ್ಡ್ ಮೂಲಕ ಡಿಸಿಸಿ ಬ್ಯಾಂಕುಗಳಿಗೆ ನೀಡಲಾಗಿದ್ದು, ರೈತರ ಸಂಕಷ್ಟದ ಸಮಯದಲ್ಲಿ ಕೃಷಿಗೆ ಅವಶ್ಯಕವಾದ ಸಾಲವನ್ನು ಒದಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 24 ಲಕ್ಷ ರೈತರಿಗೆ 15300 ಕೋಟಿ ರೂಪಾಯಿ ಸಾಲ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದ್ದೇವೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಅನ್ನು ಆತ್ಮನಿರ್ಭರ ಯೋಜನೆಯಡಿ ಘೋಷಣೆ ಮಾಡಿತು. ಅದರಲ್ಲಿ ರಾಜ್ಯದ ಪಾಲಾದ 4750 ಕೋಟಿ ರೂಪಾಯಿಗಳು ಬಂದಿದ್ದು, ಇದರ ಮೂಲಕ ವಿವಿಧ ಕ್ಷೇತ್ರಗಳಿಗೆ ಸಾಲವನ್ನು ಸಹಕಾರ ಇಲಾಖೆ ಮೂಲಕ ವಿತರಣೆ ಮಾಡಲಾಗುತ್ತಿದೆ. ಆದರೆ, ಸಹಕಾರ ಇಲಾಖೆಗೆ ಆರ್ಥಿಕ ನಿರ್ಭರದಡಿ ಇನ್ನೂ ಹೆಚ್ಚಿನ ಅನುದಾನ ಬೇಕಿರುವುದರಿಂದ 600 ಕೋಟಿ ರೂಪಾಯಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಸಚಿವರು ತಿಳಿಸಿದರು.

ಶೂನ್ಯ ಬಡ್ಡಿದರದಲ್ಲಿ 2ರಿಂದ 3 ಲಕ್ಷ ರೂ.ವೆರೆಗೆ ಸಾಲ

additional,600 crores,soulful,feet,Proposal,Center,grants,Minister,S.T.Somashekhar

ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಶೂನ್ಯ ಬಡ್ಡಿದರದಲ್ಲಿ 2ರಿಂದ 3 ಲಕ್ಷ ರೂ.ವೆರೆಗೆ ಸಾಲ ನೀಡಲಾಗುತ್ತಿದೆ. ಈ ಮೂಲಕ ರೈತರ ಸ್ವಾವಲಂಬನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಆರ್ಥಿಕ ಸ್ಪಂದನ ಯಶಸ್ಸಿಗೆ ಶ್ರಮ

ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದರ ಮೂಲಕ 39,600 ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು ಹಾಕಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು 4 ಕಂದಾಯ ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಈಗಾಗಲೇ ಸಹಾಯಧನ ವಿತರಣೆ ಮಾಡಲು ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯ ದುರ್ಬಳಕೆಯಾಗಬಾರದು ಎಂಬ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ. ಈ ಮೂಲಕ ಯೋಜನೆ ಯಶಸ್ಸಿಗೆ ಶ್ರಮ ವಹಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

key words :  additional-600 crores-soulful-feet-Proposal-Center-grants-Minister-S.T.Somashekhar