ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಹಿಳಾ ವಾರ್ಡನ್ ಗೆ ನ್ಯಾಯಾಂಗ ಬಂಧನ.

Promotion

ಚಿತ್ರದುರ್ಗ,ಸೆಪ್ಟಂಬರ್,8,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಮುರುಘಾ ಶ್ರೀ ಸೇರಿ ಉಳಿದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 12ಕ್ಕೆ ಚಿತ್ರದುರ್ಗ 2ನೇ ಹೆಚ್ಚವರಿ ಸೆಷನ್ಸ್ ನ್ಯಾಯಾಲಯ ಮುಂದೂಡಿಕೆ ಮಾಡಿದೆ.

ಹಾಗೆಯೇ 2ನೇ ಆರೋಪಿ ಮಹಿಳಾ ವಾರ್ಡನ್ ಗೆ ಸೆಪ್ಟಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗ 2ನೇ ಹೆಚ್ಚವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Key words: Adjournment -Mr. Murua shri –bail- application-hearing.