ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

Promotion

ಚಿತ್ರದುರ್ಗ, ಸೆಪ್ಟಂಬರ್,7,2022(www.justkannada.in): ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ  ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯನ್ನ  ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮುರುಘಾ ಶ್ರೀಗಳು ಜೈಲುಪಾಲಾಗಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ.

ಅಲ್ಲದೆ ಜಾಮೀನಿಗೆ ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

Key words: Adjournment –Muruga shri-  bail –application- hearing.