ಕೆಎಸ್ ಒಯು  2020-21ನೇ(ಜುಲೈಅವೃತ್ತಿ) ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಗಳಗೆ ಪ್ರವೇಶಾತಿ ಪ್ರಾರಂಭ… 

ಮೈಸೂರು,ಸೆಪ್ಟಂಬರ್,3,2020(www.justkannada.in): ಮೈಸೂರಿನ ಕರಾಮುವಿಯು ಪ್ರಸಕ್ತ 2020-21ನೇ (ಜುಲೈಅವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ದಂಡ ಶುಲ್ಕವಿಲ್ಲದೇ  ಅಕ್ಟೋಬರ್ 10. 2020 ರಂದು ಪ್ರವೇಶಾತಿಗೆ ಕಡೆ ದಿನಾಂಕವಾಗಿದೆ.jk-logo-justkannada-logo

ಪ್ರಸಕ್ತ 2020-21ನೇ (ಜುಲೈಅವೃತ್ತಿ) ಶೈಕ್ಷಣಿಕ ಸಾಲಿಗೆ ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ.,ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ.ಎಂ.ಬಿ.ಎ ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಕರಾಮುವಿಯು ಮಲ್ಲೇಶ್ವರಂನ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಎಲ್ಲರಿಗೂ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ಕರಾಮುವಿಯ ಅಧಿಕೃತ ವೆಬ್ಸೈಟ್(www.ksoumysuru.ac.in ) ನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್ ಲೈನ್ ನಲ್ಲಿ ಅರ್ಜಿ  ಭರ್ತಿ ಮಾಡಿ ನಂತರ ಡೌನ್ಲೋಡ್ ಮಾಡಿಕೊಂಡು ಪ್ರಾದೇಶಿಕ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಲು ತಿಳಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್  ತಿಳಿಸಿದ್ದಾರೆ.

ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ 10/10/2020, 100ರೂ ದಂಡ ಶುಲ್ಕದೊಂದಿಗೆ 20/10/2020 ಹಾಗೂ 200ರೂ ದಂಡ ಶುಲ್ಕದೊಂದಿಗೆ 29/10/2020 ಕಡೆಯ ದಿನಾಂಕವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕ  ಡಾ.ಲೋಕೇಶ್  ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಬಿ.ಪಿ.ಎಲ್. ಕಾರ್ಡ್ ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು.ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಸರ್ಕಾರಿ ರಜೆ ದಿನಗಳಂದು ಮತ್ತು ಭಾನುವಾರಗಳಂದು ಕಛೇರಿ ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ.admission-open-2020-21-july-mysore-ksou-pg-ug-courses

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಛೇರಿ ದೂರವಾಣಿ ಸಂಖ್ಯೆ-080 23448811, 9844506629, 9620395584, 7760848564..

Key words: Admission –open- 2020-21 (July)-Mysore- KSOU-PG- UG- Courses