ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ 2021-22ನೇ ಸಾಲಿನ  ಪ್ರವೇಶಾತಿ ಪ್ರಕ್ರಿಯೆ ತಾತ್ಕಾಲಿಕ ಮುಂದೂಡಿಕೆ.

ಬೆಂಗಳೂರು,ಆಗಸ್ಟ್,3,2021(www.justkannada.in): ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಕಾಲೇಜು ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಕೈಗೊಳ್ಳಲು ಉಲ್ಲೇಖಿತ ಸುತ್ತೋಲೆಯಲ್ಲಿ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು. ಅದರಂತೆ ದಿನಾಂಕ:04.08.2021 ರಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಲಾಗಿತ್ತು.

ಆದರೆ ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ  ಮುಂದೂಡುವಂತೆ ಸೂಚಿಸಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಆಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Key words: Admission -Procedure -Government – Privately- Aided- Degree Colleges – postponement.